Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರು ಸಹಿತ ಕಿತ್ತು ಬಿಸಾಕುತ್ತೇವೆ: ಸಿಎಂ ಸಿದ್ದರಾಮಯ್ಯ

Mangalore Largest Drugs Case, Chief Minister Siddaramaiah, Mangalore Police

Sampriya

ಬೆಂಗಳೂರು , ಭಾನುವಾರ, 16 ಮಾರ್ಚ್ 2025 (17:27 IST)
ಬೆಂಗಳೂರು:  ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,  ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ.

ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.

ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಏರುತ್ತಲೇ ಉಷ್ಣಾಂಶ, ಎಲ್ಲೆಲ್ಲಿ ಮಳೆ ಸಾಧ್ಯತೆ