Select Your Language

Notifications

webdunia
webdunia
webdunia
webdunia

150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ: ಸಿಎಂಗೆ ಬಿಎಸ್‌ವೈ ಸವಾಲ್

150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ: ಸಿಎಂಗೆ ಬಿಎಸ್‌ವೈ ಸವಾಲ್
ಮಂಗಳೂರು , ಶನಿವಾರ, 13 ಮೇ 2017 (13:23 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಕಾಂಗ್ರೆಸ್ ಸರಕಾರವೇ ಕಾರಣವಾಗಿದೆ ಎಂದು ಆರೋಪಿಸಿದರು.
 
ಸರಕಾರ ಬರನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬರಗಾಲ ಪೀಡಿತರನ್ನು ಭೇಟಿ ಮಾಡುವ ಸೌಜನ್ಯ ಕೂಡಾ ಸಿಎಂ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕೇಂದ್ರ ಸರಕಾರ ನೀಡಿದ ಅನುದಾನ ಕೂಡಾ ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಕೇವಲ ರಾಜಕೀಯಕ್ಕಾಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು: ಪಾಕ್ ಸೇನಾ ದಾಳಿಗೆ ತಂದೆ, ಮಗಳು ಸಾವು