Publish Date: Mon, 01 Apr 2024 (19:32 IST)
Updated Date: Mon, 01 Apr 2024 (19:35 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಮತ್ತೇ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜತೆ ಸೇರಿಕೊಂಡು ತಮ್ಮ ಸಿದ್ಧಾಂತದಲ್ಲಿ ಬದುಕಿದ್ದು ಸತ್ತಂತ್ತೆ ಎಂದರು.
ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಟಿಕೆಟ್ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.
ಇದಕ್ಕೆ ತಿರುಗೇಟು ನೀಡಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಕೇಸರಿ ಶಾಲು ಧರಿಸುವುದು ಅಪರಾಧನೆ. ನಮ್ಮ ಸಿದ್ಧಾಂತ ಹೃದಯ ಹಾಗೂ ನಡವಳಿಕೆಯಲ್ಲಿದೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.