Daily Horoscope
✕

ಇಂದು ಈ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

Krishnaveni K
ಭಾನುವಾರ, 24 ಮಾರ್ಚ್ 2024 (10:39 IST)
ಬೆಂಗಳೂರು: ಬಿಸಿಲ ಬೇಗೆಗೆ ತತ್ತರಿಸಿರುವ ಜನಕ್ಕೆ ಈಗ ಒಮ್ಮೆ ಮಳೆ ಬಂದರೆ ಸಾಕು ಎನ್ನುವ ಪರಿಸ್ಥಿತಿಯಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ‍್ಯತೆಯಿದೆ.

ಇಂದು ಒಟ್ಟು 7 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ‍್ಯತೆಯಿದೆ ಎಂದು ವರದಿಯಾಗಿದೆ.

ಆದರೆ ಕುಡಿಯುವ ನೀರಿಗೂ ಪರದಾಡುತ್ತಿರುವ ಬೆಂಗಳೂರಿಗೆ ಇನ್ನೂ ಮಳೆಯ ಸೂಚನೆಯಿಲ್ಲ. ಬೆಂಗಳೂರು ಜೊತೆಗೆ ಉತ್ತರ ಕನ್ನಡ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಮೊದಲಾದೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡದ ಗಡಿಭಾಗಳಲ್ಲಿ ಎರಡು ದಿನದ ಹಿಂದೆ ಮಳೆಯಾಗಿತ್ತು. ಇದೀಗ ಮಂಗಳೂರಿನ ಪಣಂಬೂರು ಭಾಗದಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ. ಆದರೆ ತೀವ್ರ ನೀರಿನ ಕೊರತೆ ಎದುರಿಸುತ್ತಿರುವ ರಾಜ್ಯ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments