Webdunia - Bharat's app for daily news and videos

Install App

ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಪರಿಶೀಲನೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:41 IST)
ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ. ಜಿಲ್ಲಾಡಳಿತವು ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ರಾತ್ರಿಯ ಸಮಯದಲ್ಲಿ ಸಾಮಾಜಿಕ ಕೂಟಗಳನ್ನು ತಪ್ಪಿಸಲು ರಾತ್ರಿ ಕರ್ಫ್ಯೂ ವಿಧಿಸುವುದು ಉತ್ತಮ. ಆದರೆ ವಿಕೇಂಡ್ ಕರ್ಪ್ಯೂವಿನಿಂದ ಯಾವುದೇ ಪ್ರಯೋಜನವಿಲ್ಲ. ವಿಕೇಂಡ್ ಕರ್ಪ್ಯೂ ಇರೋ ಕಾರಣ ಜನರು ವಿಕೇಂಡ್ ಬದಲು ಶುಕ್ರವಾರ ಅಥವಾ ಸೋಮವಾರದಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ ಎಂದರು.
ಇನ್ನು ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ನಮ್ಮ ಶಾಸಕರೇ ಮುಖ್ಯಮಂತ್ರಿಗೆ ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಮನವಿ ಪತ್ರವನ್ನು ಸಲ್ಲಿಸುತ್ತಾರೆ. ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಮೂಲಕ ಜನರನ್ನು ಸಮಾಧಾನಪಡಿಸಲು ಮತ್ತು ಗೊಂದಲ ಸೃಷ್ಟಿಸಲು ಬಯಸುತ್ತಾರೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments