Webdunia - Bharat's app for daily news and videos

Install App

ವಾರಾಂತ್ಯ ನಿಷೇಧಾಜ್ಞೆ - ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್

Webdunia
ಶುಕ್ರವಾರ, 7 ಜನವರಿ 2022 (20:47 IST)
ಬೆಂಗಳೂರು:-ವಾರಾಂತ್ಯ ನಿಷೇಧಾಜ್ಞೆ ಇಂದು (ಜ 7) ರಾತ್ರಿ 8 ಗಂಟೆಯಿಂದ ರಾಜ್ಯಾದ್ಯಂತ ಜಾರಿಯಾಗಲಿದ್ದು, ವೀಕೆಂಡ್ ಕಫ್ರ್ಯೂ ಹಿನ್ನೆಲೆಯಲ್ಲಿ ಜ 8 ರಂದು ಶನಿವಾರ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಗಲಿದೆ. ಈಗಾಗಲೇ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿರುವ ಬೆಂಗಳೂರು ನಗರದಲ್ಲೂ ಕೂಡ ವಿನಾಯಿತಿ ಇರುವ 10, 11, 12ನೇ ತರಗತಿ ಮಕ್ಕಳಿಗೂ ಭೌತಿಕ ತರಗತಿಗಳು ಶನಿವಾರ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. 
ಕೋವಿಡ್ ವೈರಸ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ವಾರಾಂತ್ಯ ನಿಷೇಧಾಜ್ಞೆ ಜ 7 ರ ಶುಕ್ರವಾರ ರಾತ್ರಿ 8 ರಿಂದ ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳನ್ನೂ ತೆರೆಯದಂತೆ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್.  ವಿಶಾಲ್ ಅವರು ಇಲಾಖೆಯ ಎಲ್ಲ ಜಿಲ್ಲಾ ಉಪ ನಿರ್ದೇಶಕರುಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments