Publish Date: Sun, 24 Dec 2023 (19:09 IST)
Updated Date: Sun, 24 Dec 2023 (18:12 IST)
ಸಾವಿರಾರು ಸಂಖ್ಯೆಯ ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದ ಕಕ್ಷೆಯಿಂದ ಹೊರತಳ್ಳಿದ ಹಿಜಾಬ್ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಹಿಜಾಬ್ ನಿಷೇಧ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿರುವುದು ಸ್ವಾಗತಾರ್ಹ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿ ತಿಳಿಸಿದೆ.
ಶಿಕ್ಷಣ ಪಡೆಯುವುದು ಆದ್ಯತೆಯಾಗಬೇಕು ಎಂದು ಸಂಘಟನೆಯ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಕಾರ್ಯದರ್ಶಿ ದೇವಿ, ಉಪಾಧ್ಯಕ್ಷೆ ಕೆ. ಎಸ್. ವಿಮಲಾ ಪ್ರತಿಪಾದಿಸಿದ್ದಾರೆ