Publish Date: Fri, 26 Jun 2020 (20:45 IST)
Updated Date: Fri, 26 Jun 2020 (20:47 IST)
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಮುಂದಾಗಿದೆ.
ಪಶುಸಂಗೋಪನೆ ಇಲಾಖೆಯ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈ ಹಿಂದೆ ಅಧಿಕಾರದಲ್ಲಿದ್ದಕಾಂಗ್ರೆಸ್ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷ ತೊರಿತ್ತು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಿಕೊಳ್ಳಲು ಕ್ರಮ ವಹಿಸಲಾಗಿದ್ದು ಸದ್ಯದಲ್ಲೆಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಕೋವಿಡ್-19 ಸಂಕಷ್ಟದ ಸಮಯದಲ್ಲಿ ಉದ್ಯೋಗ ಸೃಷ್ಟಿ ಆಗುತ್ತಿರುವುದು ಮತ್ತಷ್ಟು ಸಂತಸ ತಂದಿದೆ ಎಂದು ಸಚಿವರು ಹೇಳಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಕುರಿತು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದರ ಪರಿಣಾಮವಾಗಿ ಖಾಲಿ ಇರುವ ಹುದ್ದೆಗಳನ್ನುಶ್ರೀಘ್ರದಲ್ಲಿ ತುಂಬಿಕೊಳ್ಳುಲು ಕ್ರಮ ಕೈಗೊಳ್ಳುದಾಗಿ ಸಿ.ಎಂ ಭರವಸೆ ನೀಡಿದ್ದರು ಎಂದಿದ್ದಾರೆ.