ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ವೆಚ್ಚ ಕಡಿತ ಮಾಡಲು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಹುದ್ದೆಗಳ ನೇಮಕಾತಿಗೆ ತಡೆ ನೀಡಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದ್ದು,ಷರತ್ತುಗಳೊಂ ದಿಗೆ ನೇರ ನೇಮಕಕ್ಕೆ ಅವಕಾಶ ನೀಡಿ ಆದೇಶ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆ ಉಂಟಾಗಿದೆ.