ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉಪ ಚುನಾವಣೆಯಲ್ಲಿ ಭವಾನಿಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ತೃಣಮೂಲ ಪಕ್ಷ ಘೋಷಿಸಿದೆ.
ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಂದ ಉಪ ಚುನಾವಣೆ ಘೋಷಿಸಿದ ಬೆನ್ನಲ್ಲೇ ಟಿಎಂಸಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ.
ಜಂಗೀರ್ ಪುರ್ ಕ್ಷೇತ್ರದಿಂದ ಜಾಕಿರ್ ಹುಸೇನ್ ಮತ್ತು ಸಮ್ಶೆರ್ ಗಂಜ್ ನಿಂದ ಅಮಿರುಲ್ ಇಸ್ಲಾಂ ಕಣಕ್ಕಿಳಿಯಲಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಸೋಲುಂಡಿದ್ದರು. ಆದರೆ ಅವರ ಪಕ್ಷ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿತ್ತು. ಈ ಉಪ ಚುನಾವಣೆಯಲ್ಲಿ ಗೆದ್ದರೆ ಮಮತಾ ಶಾಸಕಿಯಾಗಿ ವಿಧಾನಸಭೆ ಅಧಿಕೃತವಾಗಿ ಪ್ರವೇಶಿಸಲಿದ್ದಾರೆ.