Daily Horoscope

Select Your Language

Notifications

webdunia
webdunia
webdunia
webdunia

ಬಾಲಕಿ ಮೇಲೆ ಮನೆ ಮಾಲೀಕ ಮಾಡಿದ್ದೇನು!

ಮನೆ ಮಾಲೀಕ
ಮನೆ ಮಾಲೀಕನೊಬ್ಬ 5 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಬಾಡಿಗೆ ಮನೆಯಲ್ಲಿ ಹೆತ್ತವರ ಜೊತೆ ವಾಸವಾಗಿದ್ದ ಅಪ್ರಾಪ್ತ ಬಾಲಕಿಗೆ ಮನೆಯ ಮಾಲಕನೇ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಜೋಡುರಸ್ತೆ ಕಾರಲ್‌ಗುಡ್ಡೆ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆ ಮಾಲಿಕ ಸ್ಥಳೀಯ ನಿವಾಸಿ ಸಂತೋಷ್.ಕೆ ಎಂಬಾತನನ್ನು ಬಂಧಿಸಲಾಗಿದೆ.

ಆರೋಪಿ ಸಂತೋಷ್‌ನ ಬಾಡಿಗೆ ಮನೆಯಲ್ಲಿ ದಂಪತಿ ವಾಸವಾಗಿದ್ದು, ಅವರ 5 ವರ್ಷ ಪ್ರಾಯದ ಬಾಲಕಿ ಮೇಲೆ ಈತ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಕಳೆದ ಒಂದೂವರೆ ತಿಂಗಳಿನಿಂದ ಆರೋಪಿ ಬಾಲಕಿಯ ಗುಪ್ತಾಂಗಕ್ಕೆ ಕೈಹಾಕುವ ಮೂಲಕ ಗಾಯಗೊಳಿಸಿದ್ದ ಮತ್ತು ಬೇರೆ ಬೇರೆ ರೀತಿಯಲ್ಲಿ ಬಾಲಕಿಯ ಜೊತೆ ವಿಕೃತಿ ಮೆರೆದಿದ್ದ ಎನ್ನಲಾಗಿದೆ.

ಮನೆಯಲ್ಲಿ ಮಗುವಿಗೆ ಸ್ನಾನ ಮಾಡಿಸುವ ವೇಳೆ ಪೋಷಕರು ಗಾಯದ ಬಗ್ಗೆ ವಿಚಾರಿಸಿದಾಗ ಆರೋಪಿಯ ಹೇಯಕೃತ್ಯ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೈಟ್ ಆಸೆಗೆ ನಾದಿನಿಯನ್ನೇ ಕೊಂದ ಭೂಪ ಅರೆಸ್ಟ್