ಬೆಂಗಳೂರು : ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕೃತ್ಯ ನಡೆದ 24 ಗಂಟೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೊಡ್ಡಜಾಲದಲ್ಲಿ ಮಹಿಳೆ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಎಸಗಿದ್ದರು. ಮಹಿಳೆಯನ್ನು ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ, ಮನೆಯಲ್ಲಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು.