Select Your Language

Notifications

webdunia
webdunia
webdunia
webdunia

ಡಿಸಿ, ಜಿಪಂ ಸಿಇಓ ಸಭೆಯ ಹೈಲೈಟ್ಸ್ ಏನು?

ಡಿಸಿ, ಜಿಪಂ ಸಿಇಓ ಸಭೆಯ ಹೈಲೈಟ್ಸ್ ಏನು?
ಬೆಂಗಳೂರು , ಗುರುವಾರ, 13 ಜೂನ್ 2019 (18:30 IST)
ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಎರಡು ದಿನಗಳ ಸಭೆ ನಡೆಯಿತು. ಅದರ ಹೈಲೈಟ್ಸ್ ಇಲ್ಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 13-6-2019 ರಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಮುಖ್ಯಾಂಶಗಳು:

1.    ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನದ ಶೇ. 75 ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

2.    ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಗಳಿಗೆ ಮಂಜೂರಾದ 4080 ಕಾಮಗಾರಿಗಳಲ್ಲಿ 765 ಪೂರ್ಣಗೊಂಡಿದೆ. 1939 ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಸೂಚಿಸಿದರು.

3.    ಎಲ್ಲ ಜಿಲ್ಲೆಗಳಳಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
4.    ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳು ಸಕಾಲದಲ್ಲಿ ಪೂರ್ಣಗೊಳಿಸಲು ಅನುವಾಗುವಂತೆ ತುರ್ತಾಗಿ ಭರ್ತಿ ಮಾಡುವ ಅಗತ್ಯವಿರುವ ಹುದ್ದೆಗಳಿಗೆ ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
5.    ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಯಿತು.

6.    ದೇವರಾಜ ಅರಸು ವಸತಿ ಯೋಜನೆಯಡಿ ದಮನಿತರು, ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಎಂದು ಸೂಚಿಸಲಾಯಿತು. ನಿಗದಿ ಪಡಿಸಲಾಗಿರುವ 63,196 ಗುರಿಗೆ ಎದುರಾಗಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಶೀಘ್ರವೇ ಆಸಕ್ತಿ ವಹಿಸಿ, ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

7. ಮುಖ್ಯಮಂತ್ರಿ ಗಳ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಕೂಡಲೇ ಜಮೀನು ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

 


Share this Story:

Follow Webdunia kannada

ಮುಂದಿನ ಸುದ್ದಿ

ಬೆತ್ತಲೆ ಮೆರವಣಿಗೆ ಪ್ರಕರಣ: ಖಂಡನೆ