ಬೆಂಗಳೂರು : ಬಹುಸಂಖ್ಯಾತ ಹಿಂದೂಗಳ ಪ್ರಮುಖ ಬೇಡಿಕೆಯಾದ, ಮುಜುರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಿಗೆ ಸ್ವಾಯತ್ತತೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮೂಲಕ ಅಧಿಕೃತ ಘೋಷಣೆ ಮಾಡಿದ್ದಾರೆ.
ದೇಗುಲಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತ ಮಾಡುವಂತೆ ಭಕ್ತರು ಇಟ್ಟಿದ್ದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಸಿಎಂ ಪ್ರಕಟಿಸಿದರು.
* ಮುಜುರಾಯಿ ಇಲಾಖೆಯ ದೇಗುಲಗಳಿಗೆ ಸ್ವಾಯತ್ತತೆ
* ದೇವಾಲಯಗಳ ಅಭಿವೃದ್ಧಿಗೆ 158 ಕೋಟಿ ರೂ. ಅನುದಾನ
* ಅರ್ಚಕರು, ಆಗಮಿಕರು, ನೌಕರರ ತಸ್ತಿಕ್ ಹಣ ಹೆಚ್ಚಳ- 48ರಿಂದ 60 ಸಾವಿರಕ್ಕೆ ಹೆಚ್ಚಳ
* ಗೋವುಗಳನ್ನು ದತ್ತು ತೆಗೆದುಕೊಳ್ಳಲು ಪುಣ್ಯಕೋಟಿ ಯೋಜನೆ
* ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ 5 ಸಾವಿರ ರೂ.ಸಹಾಯಧನ
* 100 ಕೋಟಿ ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ
* ಚಾಮುಂಡಿ ಬೆಟ್ಟ, ದತ್ತಪೀಠದಲ್ಲಿ ರೋಪ್ವೇ ನಿರ್ಮಾಣ ಪ್ರಸ್ತಾವನೆ
* ಆಂಧ್ರದ ಶ್ರೀಶೈಲಂನಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ
* ಕುಕ್ಕೆ, ಧರ್ಮಸ್ಥಳ, ಮಂತ್ರಾಲಯ, ತಿರುಪತಿಗೆ ಪ್ಯಾಕೇಜ್ ಟ್ರಿಪ್