Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?

ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?
NewDelhi , ಸೋಮವಾರ, 29 ಮೇ 2017 (12:12 IST)
ನವದೆಹಲಿ: ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಯಲ್ಲಿ ಬೀಡುಬಿಟ್ಟಿರುವ ಸಿಎಂ ಸಿದ್ಧರಾಮಯ್ಯ, ಇಂದೇ ನೂತನ ಸಾರಥಿಯ ನೇಮಕವಾಗುವುದು ಎಂದಿದ್ದಾರೆ.

 
ತುಘಲಕ್ ಕ್ರೆಸೆಂಟ್ ನಿವಾಸದಲ್ಲಿ ರಾಹುಲ್ ಗಾಂಧಿ ಭೇಟಿಗೆ ಮುನ್ನ  ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ಧು, ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಜತೆಗೆ ಮುಂಬರುವ ಚುನಾವಣೆಗೆ ಸಿದ್ಧತೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನ ಘಟನಾನುಘಟಿ ನಾಯಕರೆಲ್ಲರೂ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಎಲ್ಲಾ ನಾಯಕರೊಂದಿಗೆ ರಾಹುಲ್ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ರಾಜಕೀಯ ಧ್ರುವೀಕರಣ ಮತ್ತು ಜಾತಿ ಲೆಕ್ಕಾಚಾರಗಳ ಆಧಾರದಲ್ಲಿ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ನಾಯಕನ ಆಯ್ಕೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಭಟನೆ ಮಾಡುವ ನೆಪದಲ್ಲಿ ಕರುವನ್ನು ಸಾರ್ವಜಿಕವಾಗಿ ಕೊಂದು ತಿಂದರು!