Publish Date: Wed, 14 Aug 2019 (20:37 IST)
Updated Date: Wed, 14 Aug 2019 (20:40 IST)
ಅನರ್ಹ ಶಾಸಕರೊಬ್ಬರು ರೋಡಿಗೆ ಬಂದು ಈ ಕೆಲಸ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ಪಟ್ಟಣದಲ್ಲಿ ಅನರ್ಹ ಶಾಸಕ ಡಾ.ನಾರಾಯಣಗೌಡ ಮತ್ತು ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಗಂಗಾಧರ ಶಿವಾಚಾರ್ಯರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ್ರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಹಾಗೂ ನಿರಾಶ್ರಿತರಿಗೆ ನಿಧಿ ಮತ್ತು ಜೀವನಾವಶ್ಯಕ ವಸ್ತುಗಳನ್ನು ಸಂಗ್ರಹಿಸಲಾಯಿತು.
ಎಪಿಎಂಸಿ ಮಾರುಕಟ್ಟೆ, ಎಳನೀರು ಮಾರುಕಟ್ಟೆ, ಮೈಸೂರು ರಸ್ತೆ, ಮುಖ್ಯರಸ್ತೆ, ನಾಗಮಂಗಲ ರಸ್ತೆ, ಹಳೇ ಕಿಕ್ಕೇರಿ ರಸ್ತೆಯಲ್ಲಿ ಪಾದಯಾತ್ರೆ ನಡೆಸಿದ ಶ್ರೀಗಳು ಮತ್ತು ನಾರಾಯಣಗೌಡ, ವರ್ತಕರು ಮತ್ತು ಸಾರ್ವಜನಿಕರಿಂದ ಜೀವನಾವಶ್ಯಕ ವಸ್ತುಗಳನ್ನು ಸಂಗ್ರಹಿಸಿದರು.
ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂ ಸೇವಕರು ಸೇರಿದಂತೆ ನೂರಾರು ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ರು.