Publish Date: Fri, 01 Mar 2019 (20:38 IST)
Updated Date: Fri, 01 Mar 2019 (20:39 IST)
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಟೋ ಚಾಲಕನೊಬ್ಬ ಮಾಡಬಾರದ ಅನಾಹುತ ಮಾಡಿಬಿಟ್ಟಿದ್ದಾನೆ.
ಆಟೋ ಚಾಲಕರೊಬ್ಬರು ಅತಿಯಾದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನಡೆದಿದೆ.
ಕೋಡಿಪಾಳ್ಯದ ವಿನಾಯಕ ಲೇಔಟ್ನ ಸತೀಶ್ (36) ಆತ್ಮಹತ್ಯೆ ಮಾಡಿಕೊಂಡವರು. ಆಟೋ ಚಾಲಕರಾಗಿದ್ದ ಸತೀಶ್, ಕೌಟುಂಬಿಕ ಕಲಹದಿಂದ ಮನನೊಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತಿಯಾದ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.