Publish Date: Tue, 17 Nov 2020 (12:45 IST)
Updated Date: Tue, 17 Nov 2020 (12:47 IST)
ಮೈಸೂರು : ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ ಯುವಕನೊಬ್ಬ 26 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಂತ್ರಸ್ತೆ ಹಾಗೂ ಆರೋಪಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಯುವತಿ ಹಾಗೂ ಆಕೆಯ ಮನೆಯವರು ಒಪ್ಪಿಗೆ ನೀಡಲಿಲ್ಲ. ಇದರಿಂದ ಕೋಪಗೊಂಡ ಯುವಕ ರಾತ್ರಿ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಆಕೆಗೆ ಇರಿದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ.
ಆರೋಪಿ ಯುವಕ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.