ಹುಬ್ಬಳ್ಳಿ : ಸುಮಲತಾ ಅವರು ಬಿಜೆಪಿ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಅವರು ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ ಬಿಎಸ್.ಯಡಿಯೂರಪ್ಪ ಅವರು,’ ಸುಮಲತಾ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸುಮಲತಾ ಕೈಗೊಳ್ಳುವ ನಿರ್ಧಾರದ ಬಳಿಕ ನಾವು ತೀರ್ಮಾನ ಮಾಡುತ್ತೇವೆ’ ಎಂದು ಹೇಳಿದ್ದಾರೆ.
ಹಾಗೇ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಬಗ್ಗೆ ಚರ್ಚೆ ಆಗಿಲ್ಲ. ರಾಜ್ಯದಲ್ಲಿ 22 ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸ್ತೇವೆ. ಹಾಗೇ ದೇಶದಲ್ಲಿ 300ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.