Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರ ಸಿಎಂ ಟ್ವೀಟ್ ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?

ಮಹಾರಾಷ್ಟ್ರ ಸಿಎಂ ಟ್ವೀಟ್ ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?
ಬೆಂಗಳೂರು , ಸೋಮವಾರ, 18 ಜನವರಿ 2021 (11:34 IST)
ಬೆಂಗಳೂರು :ಬೆಳಗಾವಿ ಜಿಲ್ಲೆಯ ಬಗ್ಗೆ ಮಹಾರಾಷ್ಟ್ರ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು ಟ್ವೀಟ್ ಮೂಲಕ ಸಿಎಂ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಮಹಾಜನ್ ವರದಿ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕ ಪ್ರದರ್ಶನ, ಭಾಷಾಂಧತೆ ಮಾತು. ದೇಶದ ಏಕತೆಗೆ ಮಾರಕವಾಗಿದೆ. ಇದನ್ನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ.

ಅದೇರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲೂ ಬೆರೆತಿದ್ದಾರೆ. ಸೌಹಾರ್ದಯುತ ವಾತಾವರಣ ಕೆಡಿಸುವ ಪ್ರಯತ್ನ ನಡೆದಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ನಡೆ ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಒಕ್ಕೂಟ ತತ್ವ ಗೌರವಿಸಿ, ಬದ್ಧತೆಯನ್ನು ತೋರಲಿ  ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉದ್ಧವ್ ಠಾಕ್ರೆ ಟ್ವೀಟ್ ಗೆ ಡಿಸಿಎಂ ಲಕ್ಷ್ಮಣ್ ಸವದಿ ಕಿಡಿ