ಬೆಂಗಳೂರು : ದೇವೇಗೌಡರ ಮಧ್ಯಂತರ ಚುನಾವಣೆಯ ಕುರಿತ ಹೇಳಿಕೆ ವಿಚಾರ ಹೆಚ್.ಡಿ.ದೇವೇಗೌಡರಿಗೆ ಯಾವುದೇ ಅಸಮಾಧಾನವಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತದೆ. ಬಿಜೆಪಿಯವರು ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಸರ್ಕಾರ ಉರುಳಿಸುವ ಬಗ್ಗೆ ಹೇಳುತ್ತಿದ್ದರು. ಈಗ ಯಾರ ಸಹವಾಸಕ್ಕೂ ಹೋಗುದಿಲ್ಲ ಅನ್ನುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹಾಗೇ ಈ ಬಗ್ಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ದೇವೇಗೌಡರು ಹಿರಿಯರು, ಅನುಭವಸ್ಥರು, ಪ್ರಧಾನಿ ಆಗಿದ್ದವರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಾನು, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಕೂತು ಮಾತಾಡುತ್ತೇವೆ. ಅವರು ಹೇಳಿಕೆ ನೀಡುವಾಗ ಯೋಚನೆ ಮಾಡಿಯೇ ಹೇಳಿರುತ್ತಾರೆ ಎಂದು ಹೇಳಿದ್ದಾರೆ.