Select Your Language

Notifications

webdunia
webdunia
webdunia
webdunia

ಡಿಕೆ ಚೌಟ ಬಗ್ಗೆ ದೇವೇಗೌಡ ಹೇಳಿದ್ದೇನು?

ಡಿಕೆ ಚೌಟ ಬಗ್ಗೆ ದೇವೇಗೌಡ ಹೇಳಿದ್ದೇನು?
ಬೆಂಗಳೂರು , ಬುಧವಾರ, 19 ಜೂನ್ 2019 (15:59 IST)
ಕರ್ನಾಟಕ ಚಿತ್ರಕಲಾ ಪರಿಷತ್ ನ ಮಾಜಿ ಅಧ್ಯಕ್ಷರಾಗಿದ್ದ ದರ್ಬೆ ಕೃಷ್ಣಾನಂದ ಚೌಟರ ಅಗಲಿಕೆಗೆ ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಚೌಟ ಅವರ ನಿಧನವು ಕನ್ನಡ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ. ಕನ್ನಡದ ಹಿರಿಯ ರಂಗ ಸಂಘಟಕರಾಗಿದ್ದ ಡಿ ಕೆ ಚೌಟ, ಚಿತ್ರಕಲಾ‌ ಪರಿಷತ್ ನಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ *ಚಿತ್ರಸಂತೆ* ಏರ್ಪಡಿಸುವ‌ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಲು ಕಾರಣಕರ್ತರಾಗಿದ್ದರು. ರಂಗನಿರಂತರ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಕಳೆದ‌ ವರ್ಷ ನಡೆದ‌ *ಸಿಜಿಕೆ ರಾಷ್ಟ್ರೀಯ ರಂಗೋತ್ಸವ* ದ ಅಧ್ಯಕ್ಷರಾಗಿದ್ದರು.

ಸ್ವತಃ ಬರಹಗಾರರಾಗಿದ್ದ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಇವರ ಆತ್ಮಕ್ಕೆ ತಾಯಿ ಚಾಮುಂಡೇಶ್ವರಿ ಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಹೀಗಂತ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಂಗ ಸಂಘಟಕ ಡಿ.ಕೆ ಚೌಟ ಅಗಲಿಕೆಗೆ ಸಚಿವ ಡಿಕೆ ಶಿವಕುಮಾರ್ ಸಂತಾಪ