Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಸೇರುವ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಬಿಜೆಪಿಗೆ ಸೇರುವ ಬಗ್ಗೆ ಜಿ.ಟಿ.ದೇವೇಗೌಡರು ಹೇಳಿದ್ದೇನು?
ಬೆಂಗಳೂರು , ಶನಿವಾರ, 14 ಡಿಸೆಂಬರ್ 2019 (12:39 IST)
ಬೆಂಗಳೂರು : ಬಿಜೆಪಿಗೆ ಸೇರುವ ವಿಚಾರ ಬಗ್ಗೆ ಇದೀಗ ಜೆಡಿಎಸ್ ನಾಯಕ, ಮಾಜಿ ಸಚಿವ ಜಿ.ಟಿ.ದೇವೇಗೌಡರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.



ಈ ಹಿಂದೆ ಹಲವು ಬಾರಿ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪ ಅವರ ಬಗ್ಗೆ ಮೆಚ್ಚುಗೆ ಮಾತಗಳನಾಡುತ್ತಿದ್ದ ದೇವೇಗೌಡರು, ಜೆಡಿಎಸ್ ಪಕ್ಷಗಿಂತ ಬಿಜೆಪಿ ನಾಯಕರ ಜೊತೆಗೆ ಹೆಚ್ಚು ಒಡನಾಟ ಇಟ್ಟುಕೊಂಡಿದ್ದರು. ಆದಕಾರಣ ದೇವೇಗೌಡರು ಬಿಜೆಪಿ ಸೇರಲಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು.


ಇದೀಗ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇನೆ. ಈಗ ಜೆಡಿಎಸ್ ಪಕ್ಷದಲ್ಲಿದ್ದೇನೆ. ಮುಂದಿನ ಚುನಾವಣೆಯಲ್ಲಿ ರಾಜಕೀಯ ಧೃವೀಕರಣ ಆಗಲಿದೆ. ಆಗ ಯಾರು ಯಾವ ಪಕ್ಷದಲ್ಲಿರ್ತಾರೆ ಮುಂದೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

'ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಜಾಥ