Publish Date: Sun, 03 Nov 2019 (15:40 IST)
Updated Date: Sun, 03 Nov 2019 (15:42 IST)
ಮದ್ಯವ್ಯಸನಿಯೊಬ್ಬ ಸಾರಾಯಿ ಕುಡಿಯಲು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಮಾಡಬಾರದ ಕೆಲಸ ಮಾಡಿದ್ದಾನೆ.
ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎನ್ನೋ ಕಾರಣಕ್ಕೆ ಮನನೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಹಳೇಹುಬ್ಬಳ್ಳಿಯ ಚನ್ನಪೇಟೆಯಲ್ಲಿ ನಡೆದಿದೆ. ಗಜಾನನ ಗುರುನಾಥ ಪವಾರ (45) ಆತ್ಮಹತ್ಯೆಗೆ ಶರಣಾದವನಾಗಿದ್ದಾನೆ.
ಈತ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ. ಆದರೂ ಮದ್ಯ ಸೇವಿಸಲು ತಾಯಿಯ ಬಳಿ ಹಣ ಕೇಳಿದಾಗ ಕೊಡದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.