Publish Date: Wed, 24 Jun 2020 (10:03 IST)
Updated Date: Wed, 24 Jun 2020 (10:05 IST)
ಕೋಲಾರ : ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕನೊಬ್ಬ ಕೊರೊನಾ ಸೋಂಕಿತೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.
ವಿಶ್ವನಾಥಾಚಾರಿ ಇಂತಹ ಕೃತ್ಯ ಎಸಗಿದ ವ್ಯಕ್ತಿ. ಈತ ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಈತ ರಾತ್ರಿ ಕೋವಿಡ್ ಆಸ್ಪತ್ರೆಗೆ ನುಗ್ಗಿ ಲೈಟ್ ಆಫ್ ಮಾಡಿ ಅಲ್ಲದೇ ಸೋಂಕಿತೆಯ ಕೈ ಹಿಡಿದು ಎಳೆದಾಡಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.