ಬೆಂಗಳೂರು : ಬೆಳಗಾವಿ ಜಿಲ್ಲೆ ಬಗ್ಗೆ ಮಹಾರಾಷ್ಟ್ರ ಸಿಎಂ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಗೆ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.
									
										
								
																	
ಮರಾಠಿ ಮಾತನಾಡುವ ಪ್ರದೇಶಗಳು ನಮಗೆ ಸೇರಿದ್ದು. ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ತೇವೆ ಎಂದು ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದರು.
									
			
			 
 			
 
 			
			                     
							
							
			        							
								
																	ಈ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಉದ್ಧವ್ ಠಾಕ್ರೆ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಟ್ವೀಟರ್ ನಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.