Publish Date: Sat, 27 Jun 2020 (10:39 IST)
Updated Date: Sat, 27 Jun 2020 (10:42 IST)
ಕಲಬುರಗಿ: ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ ತಡರಾತ್ರಿಯವರೆಗೆ ಓದುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಲಬುರಗಿಯ ಕಮಲಾಪುರ ಠಾಣಾ ವ್ಯಾಪ್ತಿಯಲ್ಲಿ ಜೂನ್ 24ರಂದು ಈ ಘಟನೆ ನಡೆದಿದೆ.
ಎಸ್ .ಎಸ್.ಎಲ್ .ಸಿ ಪರೀಕ್ಷೆಗಾಗಿ ತಡರಾತ್ರಿಯವರಗೆ ಸಿದ್ಧತೆ ನಡೆಸುತ್ತಿದ್ದ ಬಾಲಕಿಯೊಬ್ಬಳನ್ನು ಸ್ಥಳೀಯ ಯುವಕನೊಬ್ಬ ಬಾಲಕಿಯ ಬಾಯಿಮುಚ್ಚಿ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿಯ ಕೂಗು ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ. ಆಗ ಕಾಮುಕ ಪರಾರಿಯಾಗಿದ್ದಾನೆ. ಘಟನೆ ಬಳಿಕ ಬಾಲಕಿ ಜೂನ್ 25ರಂದು ಪರೀಕ್ಷೆಗೆ ಹಾಜರಾಗಿದ್ದಾಳೆ.