Publish Date: Wed, 24 Jun 2020 (10:10 IST)
Updated Date: Wed, 24 Jun 2020 (10:13 IST)
ಕಲಬುರಗಿ : ಲಾಕ್ ಡೌನ್ ಮಾಡುವುದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಿಎಂ ಬಿಎಸ್ ವೈ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಂಪುಟ ಸಭೆಯಲ್ಲಿ ಲಾಕ್ ಡೌನ್ ಮಾಡುವುದರ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.