Publish Date: Sat, 03 Aug 2019 (16:52 IST)
Updated Date: Sat, 03 Aug 2019 (16:53 IST)
ಅನರ್ಹಗೊಂಡಿರೋ ರೋಷನ್ ಬೇಗ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿರೋದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ರೋಷನ್ ಬೇಗ್ ಅವರು ಸಿಎಂ ಯಡಿಯೂರಪ್ಪರ ಹತ್ತಿರ ತಮ್ಮ ನೋವು ತೋಡಿಕೊಂಡಿದ್ದಾರೆ.
ಐಎಂಎ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಪೊಲೀಸರು ವಿನಾಕಾರಣ ಪದೇ ಪದೇ ವಿಚಾರಣೆಗೆ ಕರೆದು ಹಿಂಸೆ ಕೊಡುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಪೊಲೀಸರಿಗೆ ಸೂಕ್ತ ನಿರ್ದೇಶನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.