Publish Date: Sun, 07 Jan 2018 (10:37 IST)
Updated Date: Sun, 07 Jan 2018 (10:47 IST)
ಶಿವಮೊಗ್ಗ: ಮಂಗಳೂರಿನ ಬಷೀರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.
‘ಶವದ ಮುಂದೆ ರಾಜಕೀಯ ಮಾಡುವುದನ್ನು ಆರ್.ಎಸ್.ಎಸ್ , ಭಜರಂಗದಳ ಬಿಡಬೇಕು’ ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು, ‘ಮಂಗಳೂರಿನಲ್ಲಿ ಮುಸ್ಲಿಂ ಯುವಕ ಮೃತಪಟ್ಟಿದ್ದಾನೆ. ಇದಕ್ಕೆ ಏಕೆ ಬಿಜೆಪಿ ಅವರು ಪ್ರತಿಭಟನೆ ಮಾಡುತ್ತಿಲ್ಲ. ಬಿಜೆಪಿ ಅವರು ಕೋಮು ಭಾವನೆ ಬಿತ್ತುವುದು ಬಿಡಬೇಕು’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ