ರೋಷನ್ ಬೇಗ್ ಅಮಾನತು ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬುಧವಾರ, 19 ಜೂನ್ 2019 (10:13 IST)
ನವದೆಹಲಿ : ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ ಅಮಾನತುಗೊಂಡ ವಿಚಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರೋಷನ್ ಬೇಗ್ ಗೆ ಪಕ್ಷ ನೋಟಿಸ್ ನೀಡಿತ್ತು. ಆದ್ರೆ ಅವರು ಪಕ್ಷದ ನೋಟಿಸ್ ಗೆ ಉತ್ತರ ಕೊಡಲಿಲ್ಲ. ಹೀಗಾಗಿ ಬೇಗ್ ವಿರುದ್ಧ ಕ್ರಮಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಗೆ ಕೆಪಿಸಿಸಿ ಶಿಫಾರಸು ಮಾಡಿತ್ತು ಎಂದು ಹೇಳಿದ್ದಾರೆ.


ಪಕ್ಷದಲ್ಲಿ ಅಶಿಸ್ತು ಸಹಿಸಲು ಸಾಧ್ಯವಿಲ್ಲ. ಹೀಗಾಗಿ  ರೋಷನ್ ಬೇಗ್ ನ್ನು ಪಕ್ಷದಿಂದ ಅಮಾನತು ಮಾಡಬೇಕಾಯಿತು ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಾಜಿ ಸಚಿವ ಆರ್.ರೋಷನ್ ಬೇಗ್ ಕಾಂಗ್ರೆಸ್ ಪಕ್ಷದ ಸದಸ್ಯತ್ವದಿಂದ ಅಮಾನತು