Select Your Language

Notifications

webdunia
webdunia
webdunia
Friday, 11 April 2025
webdunia

ಸಚಿವ ಅನಂತಕುಮಾರ್ ನಿಧನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು
ಬೆಂಗಳೂರು , ಸೋಮವಾರ, 12 ನವೆಂಬರ್ 2018 (12:23 IST)
ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರ  ಅಗಲಿಕೆಗೆ ಸಂತಾಪ ಸೂಚಿಸಿದ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಅನಂತಕುಮಾರ್ ಅವರು ಅಗಲಿಕೆಯಿಂದ ರಾಷ್ಟ್ರ ರಾಜಕಾರಣದಲ್ಲಿ ಬಹಳ  ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿದ ಅವರು,’ ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ಅವರು ಸಜ್ಜನ ಮತ್ತು ಸುಸಂಸ್ಕೃತ ರಾಜಕಾರಣಿಯಾಗಿದ್ದರು. ಬಹಳ ಚಿಕ್ಕ ವಯಸ್ಸಿನಲ್ಲಿಯೇ ಸಾರ್ವಜನಿಕ ಬದುಕಿನಲ್ಲಿ ತಮ್ಮನ್ನು ತೊಡಗಿಸಿಕೊಂಡು ಇಂದು ರಾಷ್ಟ್ರ ಮಟ್ಟದ ರಾಜಕಾರಣದವರೆಗೂ ಹೋಗಿದ್ದರು ಎಂದು ಹೇಳಿದ್ದಾರೆ.


ಒಬ್ಬ ಉತ್ತಮ ಆಡಳಿತಗಾರ, ಕರ್ನಾಟಕದ ಬೆಳವಣಿಗೆಯ ಬಗ್ಗೆ ಅಪಾರವಾದ ಕಾಳಜಿ ಇಟ್ಟುಕೊಂಡಿದ್ದರು, ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತಿದ್ದರು. ಕೇಂದ್ರ ಸರ್ಕಾರದಲ್ಲಿ ಇವರು ಯಾವಾಗ ಮಂತ್ರಿಯಾಗಿದ್ದರು ಆಗ ಕರ್ನಾಟಕದ ಯಾವುದೇ ಸಮಸ್ಯೆ ಬಂದರೂ ಕೂಡ ಕೇಂದ್ರ ಸರ್ಕಾರದಲ್ಲಿ ಕರ್ನಾಟಕವನ್ನು ಬಹಳ ಸಮರ್ಥಿಸುತ್ತಿದ್ದರು ಎಂದು  ಸಿದ್ದರಾಮಯ್ಯ ಅವರು ಅನಂತಕುಮಾರ್ ಬಗ್ಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬದುಕಿನ ಮೇಲೆ ನಂಬಿಕೆಯೇ ಹೋಯ್ತು ಎಂದು ನಟ ಜಗ್ಗೇಶ್ ಪರಿತಪಿಸಿದ್ದು ಯಾಕಾಗಿ ಗೊತ್ತಾ?!