ಜೆಡಿಎಸ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?

Webdunia
ಶನಿವಾರ, 2 ಮಾರ್ಚ್ 2019 (19:54 IST)
ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿರುವ ಸುಮಲತಾ ಅಂಬರೀಶ್ ಬಿರುಸಿನ ಪ್ರಚಾರ, ಪ್ರವಾಸ ನಡೆಸುತ್ತಿದ್ದಾರೆ.

ನಟಿ ಸುಮಲತಾ ರಾಜಕೀಯ ಕ್ಷೇತ್ರಕ್ಕೆ ಧುಮುಕಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಅವರು, ಸುತ್ತೂರು ಶ್ರೀಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಸ್ವಾಮೀಜಿಗಳೊಂದಿಗೆ ಉಭಯಕುಶಲೋಪರಿ ನಡೆಸಿದರು

ಈ ಸಂದರ್ಭ ಮಾತನಾಡಿದ ಅವರು,  ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯ. ಹೀಗಾಗಿ ಇಂದು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದಿದ್ದೇನೆ.

ಅಭಿ ಸಿನಿಮಾದ ಬಗ್ಗೆ ಕೂಡ ಸ್ವಾಮೀಜಿ ಅವರೊಂದಿಗೆ ಮಾತನಾಡಿದ್ದೇನೆ. ಈಗ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದೇನೆ. ಜನರ ಅಭಿಪ್ರಾಯ ಸಂಗ್ರಹಿಸಲು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ.

ಇಂದು ಕೂಡ ಕೆ.ಆರ್.ನಗರಕ್ಕೆ ಭೇಟಿ ನೀಡಲಿದ್ದೇನೆ. ರಾಜಕೀಯ ಬೆಳವಣಿಗೆ ನಿಮಗೆ ಗೊತ್ತಿದೆ. ಹಾಗಾಗಿ ಸದ್ಯಕ್ಕೆ ಏನೂ ಆಗಿಲ್ಲ. ಬೆಳವಣಿಗೆ ಇದ್ದರೆ ಮಾತನಾಡುತ್ತೇನೆ. ಜೆಡಿಎಸ್‌‌ನಿಂದ ನನ್ನ ಜೊತೆ ಯಾರೂ ಚರ್ಚೆ ನಡೆಸಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments