Daily Horoscope

Select Your Language

Notifications

webdunia
webdunia
webdunia
webdunia

ರಾಜೀನಾಮೆ ನೀಡುವ ಕುರಿತು ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದೇನು?

ಬೆಂಗಳೂರು
ಬೆಂಗಳೂರು : ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ  ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಮಗಳು, ಜಯನಗರದ  ಶಾಸಕಿ ಸೌಮ್ಯಾ ರೆಡ್ಡಿ ಅವರು  ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಸೌಮ್ಯಾ ರೆಡ್ಡಿ ಅವರು, ನಾನು ರಾಜೀನಾಮೆ ನೀಡುವುದರ ಬಗ್ಗೆ ಯೋಚನೆ ಮಾಡಿಲ್ಲ. ತಂದೆ ಹಾಗೂ ಬೆಂಬಲಿಗರು ಏನೂ ನಿರ್ಧಾರ ಮಾಡುತ್ತಾರೋ ಅವರ ನಿರ್ಧಾರಕ್ಕೆ ನಾನು ಬದ್ಧಳಾಗಿರುತ್ತೇನೆ. ನಾನು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವುದರಿಂದ ದೆಹಲಿಗೆ ಹೋಗಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೇನೆ. ರಾಜೀನಾಮೆ ನೀಡುವುದರ ಬಗ್ಗೆ ಯೋಚನೆ ಮಾಡಿಲ್ಲ. ಆದರೆ ರಾಜೀನಾಮೆ ನೀಡಬೇಡಿ ಎಂದು ಕಾಂಗ್ರೆಸ್ ನಾಯಕರು ಕೇಳಿಕೊಂಡಿದ್ದಾರೆ ಎಂದು ಹೇಳಿದ್ದಾರೆ.


ನಾನು ಕಾಂಗ್ರೆಸ್ ಶಾಸಕಾಂಗ ಸಭೆ(ಸಿಎಲ್‍ಪಿ)ಯಲ್ಲಿ ಭಾಗವಹಿಸುತ್ತಿದ್ದೇನೆ. ಅಪ್ಪ ಏನೂ ಮಾಡಿದರೂ ನಾನು ಅವರಿಗೆ ಬೆಂಬಲ ನೀಡುತ್ತೇನೆ. ಅಪ್ಪ 45 ವರ್ಷದಿಂದ ಪಕ್ಷ ಕಟ್ಟಿದ್ದಾರೆ ಹಾಗೂ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರಿಗೆ ಯಾವುದು ಸೂಕ್ತ ಎಂದು ಅನಿಸುತ್ತೋ ಅದನ್ನು ಅವರು ಮಾಡಲಿ. ನಾನು ಅವರಿಗೆ ಬೆಂಬಲ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮೈತ್ರಿ ಶಾಸಕರು ರಾಜೀನಾಮೆ ನೀಡ್ತಾರಾ? ಗುಪ್ತಚರ ಇಲಾಖೆಯಿಂದ ಬಂದ ಸ್ಪೋಟಕ ಮಾಹಿತಿ ಏನು?