Select Your Language

Notifications

webdunia
webdunia
webdunia
webdunia

ನಿಮ್ಮ ಪಡಿತರ ಕಳ್ಳತನ ಆಗುತ್ತಿದೆಯಾ?

ಪಡಿತರ
ಹಾಸನ , ಬುಧವಾರ, 9 ಸೆಪ್ಟಂಬರ್ 2020 (18:02 IST)
ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಸಚಿವರು ಈ ಕೆಲಸ ಮಾಡಿದ್ಧಾರೆ.

ಪಡಿತರ ಅಕ್ರಮ ತಡೆಗೆ ಜಾಗೃತ ದಳ ರಚಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿವೆ.

ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆ ಮಾಡಲು ಚಿಂತನೆ ನಡೆಸಲಾಗಿದೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮವಹಿಸಲಾಗುವುದು ಎಂದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ 800 ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ. ಜಿಲ್ಲಾ ಆಹಾರ ಉಪ ನಿರ್ದೇಶಕರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ : ಕೈ ಜೋಡಿಸಿ ಎಂದ ಬಿಜೆಪಿ ಸಂಸದ