Publish Date: Wed, 12 Dec 2018 (19:01 IST)
Updated Date: Wed, 12 Dec 2018 (19:04 IST)
ಊಟ ಸರಿ ಇಲ್ಲ. ಮೂಲ ಸೌಕರ್ಯಗಳಿಲ್ಲ. ನಮ್ಮ ಪಾಡು ಕೇಳೋರು ಇಲ್ಲವೇ ಇಲ್ಲ ಎಂದ ವಿದ್ಯಾರ್ಥಿಗಳು ಬೀದಿಗೆ ಇಳಿದ ಘಟನೆ ನಡೆದಿದೆ.
ಹಾಸ್ಟೆಲ್ ಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ ಎಂದು ಆರೋಪಿಸಿ ಹಾವೇರಿಯಲ್ಲಿ ವಿದ್ಯಾರ್ಥಿಗಳು ಉಪವಾಸ ಧರಣಿಯನ್ನು ಮಾಡಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ನೀರು, ಊಟವನ್ನು ಸರಿಯಾಗಿ ನಿಲಯ ಪಾಲಕರು ಕೊಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಸಾಕಷ್ಟು ಬಾರಿ ಮೇಲಾಧಿಕಾರಿಗಳಿಗೆ ಮನವಿ ಮಾಡಿದರೂ ನಮ್ಮ ಸಮಸ್ಯೆಗಳ ಬಗ್ಗೆ ಯಾವುದೇ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಉಪವಾಸ ಧರಣಿ ನಡೆಸಿದರು.