Select Your Language

Notifications

webdunia
webdunia
webdunia
webdunia

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

KPCC President BK Hariprasadh
ಬೆಂಗಳೂರು: ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್‌ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿದರು. 

ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವರದಿಯೊಂದನ್ನು ಉಲ್ಲೇಖ ಮಾಡಿ ಹರಿಪ್ರಸಾದ್ ಅವರ ಬರೆದುಕೊಂಡಿದ್ದಾರೆ. 

ಬಿಕೆ ಹರಿಪ್ರಸಾದ್ ಪೋಸ್ಟ್‌ನಲ್ಲಿ ಹೀಗಿದೆ:  ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ ಎಂದಿದ್ದಾರೆ.

ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಅದು ಆರ್‌ಎಸ್‌ಎಸ್‌ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್‌ಎಸ್‌ಎಸ್‌ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ? ಎಂದು ತಿರುಗೇಟು ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ