Publish Date: Mon, 13 Aug 2018 (19:00 IST)
Updated Date: Mon, 13 Aug 2018 (19:02 IST)
ರಾಜ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು. ಹೀಗಂತ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫರ್ಮಾನು ಹೊರಡಿಸಿದರು.
ಬೀದರ್ ನಲ್ಲಿ `ಜನಧ್ವನಿ` ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬೃಹತ್ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಅವರು, ಈಗಿನಿಂದಲೇ ಲೋಕಸಭೆ ಚುನಾವಣೆಗೆ ಸನ್ನದ್ಧರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕ ಸಮ್ಮುಖದಲ್ಲಿ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಮಾತನಾಡಿದರು. ಇದೇ ವೇಳೆ ಎಂದಿನಂತೆ ಬಿಜೆಪಿ ವಿರುದ್ಧವೂ ಹರಿಹಾಯ್ದರು.