Publish Date: Fri, 13 Dec 2019 (16:08 IST)
Updated Date: Fri, 13 Dec 2019 (16:09 IST)
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ ಮುಂದುವರಿಸಿದೆ.
ಮಸೂದೆ ವಿರೋಧಿಸಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಉದ್ದೇಶಿತ ತಿದ್ದುಪಡಿ ಮಸೂದೆಯ ಕಾಯ್ದೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಕೈ ಪಡೆ ಮುಖಂಡರು ಮನವಿ ಸಲ್ಲಿಸಿದ್ರು.
ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನದ 14 ನೇ ವಿಧಿಯಲ್ಲಿ ಉಲ್ಲೇಖಿಸಲಾದ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಹಾಗೂ ಪೌರತ್ವ ನೀಡುವ ವಿಚಾರದಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಎಸಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಈ ವಿವಾದಿತ ಮಸೂದೆಯನ್ನು ಕೈಬಿಡಬೇಕೆಂದರು.