Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಅಂತದ್ದೇನಾಯ್ತು?

ಮಾಜಿ ಸಿಎಂ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಅಂತದ್ದೇನಾಯ್ತು?
ಬೆಂಗಳೂರು , ಗುರುವಾರ, 31 ಆಗಸ್ಟ್ 2023 (12:19 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಹೆಚ್ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ.

ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಅಪೋಲೋ ಆಸ್ಪತ್ರೆಯ ಯೂನಿಟ್ ಹೆಡ್ ಹಾಗೂ ಉಪಾಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ  ನೀಡಿದರು.  ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್