Publish Date: Sun, 26 Apr 2026 (16:24 IST)
Updated Date: Sun, 26 Apr 2026 (16:27 IST)
ಬೆಂಗಳೂರು: ಯಾವಾ ಸಂದರ್ಭದಲ್ಲಿ ಏನ್ ಆಗಬೇಕು ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಇನ್ಮೇಲೆ ರಾಜಕೀಯ ವಿಚಾರವಾಗಿ ಮಾಧ್ಯಮಗಳ ಬಗ್ಗೆ ಮಾತನಾಡುವುದಿಲ್ಲ ಎಂದರು.
ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ರಾಜಕೀಯವೂ ಇಲ್ಲ. ಏನೇನೂ ತೀರ್ಮಾನ ಆಗಿವೆಯೋ ಅವು ಚಾಲ್ತಿಗೆ ಬರಲಿವೆ ಎಂದು ಸ್ಪಷ್ಟನೆ ನೀಡಿದರು.
ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಅವರು 'ಪಕ್ಷದಲ್ಲಿ ಗೊಂದಲಗಳು ಇವೆ' ಎಂಬ ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಮ್ಮ ಪಕ್ಷದಲ್ಲಿ ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಪಕ್ಷ ಮಾಡುತ್ತದೆ. ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಏನು ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ ಎಂದು ಹೇಳಿದರು.