Select Your Language

Notifications

webdunia
webdunia
webdunia
webdunia

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

Karnatak Congress Government

Sampriya

ಬೆಂಗಳೂರು , ಶುಕ್ರವಾರ, 7 ನವೆಂಬರ್ 2025 (18:33 IST)
ಬೆಂಗಳೂರು: ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ಧರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ, ರೈತರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಯಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರತಿಭಟನಾ ನಿರತ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಗಳ ಮುಖಂಡರುಗಳ ಜೊತೆ ನಡೆದ ಸಭೆಯಲ್ಲಿ ಅವರು ಹೇಳಿದರು. 

ಸಕ್ಕರೆಗೆ ಎಂಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೂಡ ಅವರೇ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರವೇ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಎಂದು ನೀವೇ ಹೇಳುತ್ತಿದ್ದೀರಿ, ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ಪ್ರಶ್ನೆ ಹಾಕಿದರು.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರಾದ ನೀವೆಲ್ಲಾ ಮನವಿ ಮಾಡಿದ್ದೀರಿ. ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 


Share this Story:

Follow Webdunia kannada

ಮುಂದಿನ ಸುದ್ದಿ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video