Select Your Language

Notifications

webdunia
webdunia
webdunia
webdunia

ಹೈಕಮಾಂಡ್ ಅಂಗಳದಲ್ಲಿ ಬಿಎಸ್ವೈ ನಿರ್ಧಾರ ಏನು?

ಹೈಕಮಾಂಡ್ ಅಂಗಳದಲ್ಲಿ ಬಿಎಸ್ವೈ ನಿರ್ಧಾರ ಏನು?
ನವದೆಹಲಿ , ಶನಿವಾರ, 23 ಜುಲೈ 2022 (12:19 IST)
ನವದೆಹಲಿ : ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧಾರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ಗೆ ವರದಿ ನೀಡಲಿದ್ದಾರೆ.

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಕಾರ್ಯಕ್ರಮದ ಹಿನ್ನೆಲೆ ನಾಳೆ ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿದ್ದು, ಈ ಬಗ್ಗೆ ಮಾಹಿತಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ. 

ಬಿಎಸ್ವೈ ನಿರ್ಧಾರದ ಬಗ್ಗೆ ಈಗಾಗಲೇ ರಾಜ್ಯ ಬಿಜೆಪಿ ಘಟಕ ಕೇಂದ್ರ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದನ್ನು ಹೊರತುಪಡಿಸಿ ಸಿಎಂ ಪ್ರತ್ಯೇಕವಾಗಿ ವರಿಷ್ಠರ ಜೊತೆಗೆ ಈ ಬಗ್ಗೆ ಚರ್ಚೆ ಮಾಡಲಿದ್ದು, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ ಎಷ್ಟು ನಷ್ಟ ಗೊತ್ತ?