Publish Date: Tue, 06 Jan 2026 (19:45 IST)
Updated Date: Tue, 06 Jan 2026 (19:50 IST)
ಬೆಂಗಳೂರು: ದೀರ್ಘಕಾಲದ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪ್ರಶ್ನೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ರಾಜ್ಯಕ್ಕೆ ನೀಡಿದ ಕೊಡುಗೆಗಳು ಏನು? ಭ್ರಷ್ಟ್ರಾಚಾರ, ಹಗರಣಗಳ ಸರಮಾಲೆ, ಹಳಿ ತಪ್ಪಿದ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟ ಆಡಳಿತ; ಇವೇ ಇವರು ಸೃಷ್ಟಿಸಿರುವ ದಾಖಲೆಗಳು ಎಂದು ಟೀಕೆ ಮಾಡಿದರು.
ಸಿದ್ದರಾಮಯ್ಯನವರು ತಮ್ಮ ಆಡಳಿತವನ್ನು ಅರಸು ಅವರ ಜತೆ ಯಾವುದೇ ರೀತಿಯಲ್ಲೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅರಸು ಧ್ವನಿ ಇಲ್ಲದವರ ಧ್ವನಿಯಾಗಿದ್ದರು.
ಹಲವು ಕ್ರಾಂತಿಕಾರಿ ಕಾನೂನುಗಳನ್ನು ಜಾರಿ ತಂದರು. ಆದರೆ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಸಿಎಂ ಸ್ಥಾನದಿಂದ ಹೊರದಬ್ಬಿ ಅಪಮಾನ ಮಾಡಿತು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.