Publish Date: Fri, 28 Apr 2023 (12:22 IST)
Updated Date: Fri, 28 Apr 2023 (11:56 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಪಕ್ಷದ ಹೈಕಮಾಂಡ್ ಫುಲ್ ಅಲರ್ಟ್ ಆಗಿದೆ.
ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಹೆಚ್ಚು ಸಕ್ರಿಯರಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಕರ್ತರಲ್ಲಿ ಹುರುಪು ತುಂಬಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 50 ಲಕ್ಷ ಕಾರ್ಯಕರ್ತರೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು.
ಚುನಾವಣೆ ಹೊತ್ತಿನಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸಗಳ ಬಗ್ಗೆ ಮೋದಿ ಅನೇಕ ಸಲಹೆಗಳನ್ನು ನೀಡಿದರು. ಸರ್ಕಾರದ ಯೋಜನೆಗಳನ್ನು ಜನರ ಬಳಿ ಕೊಂಡೊಯ್ಯುವಂತೆ ಕರೆ ನೀಡಿದರು. ಪಕ್ಷದ ನೀತಿ, ನಿರೂಪಣೆ ಹಾಗೂ ರಾಜಕೀಯ ಕಾರ್ಯತಂತ್ರಗಳ ಬಗ್ಗೆಯೂ ತಿಳಿಸಿದರು.