Publish Date: Fri, 28 Dec 2018 (14:12 IST)
Updated Date: Fri, 28 Dec 2018 (14:14 IST)
ಬೆಳಗಾವಿ : ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನ 8 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಸಚಿವ ಸತೀಶ್ ಜಾರಕಿಹೊಳಿಗೆ ಅರಣ್ಯ, ಪರಿಸರ ಖಾತೆ ನೀಡಲಾಗಿದೆ.
ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ನನಗೆ ನೀಡಿರುವ ಖಾತೆಯ ಬಗ್ಗೆ ತೃಪ್ತಿ ಇದೆ. ಖಾತೆ ಹಂಚಿಕೆಯಲ್ಲಿ ಯಾವುದೇ ಅನ್ಯಾಯವಾಗಿಲ್ಲ. ಅರಣ್ಯ ಖಾತೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಸಾರ್ವಜನಿಕರಿಗೆ ಇದು ಅನುಕೂಲವಾಗುವ ಖಾತೆ, ತಮಗೆ ಸಿಕ್ಕಿರುವ ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ’ ಎಂದು ತಿಳಸಿದ್ದಾರೆ.
ಹಾಗೇ ರಮೇಶ್ ಜಾರಕಿಹೊಳಿ ಅವರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಪಕ್ಷದ ಹೈಕಮಾಂಡ್ ಸಂಪರ್ಕಕ್ಕೂ ಸಿಕ್ಕಿಲ್ಲ. ಅವರು ಬಂದ ಮೇಲೆ ಮಾತನಾಡಿ ಸಮಸ್ಯೆ ಇತ್ಯರ್ಥ ಮಾಡುತ್ತೇವೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.