Publish Date: Fri, 26 Jan 2018 (10:30 IST)
Updated Date: Fri, 26 Jan 2018 (13:25 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹುಲಿ, ನರೇಂದ್ರಮೋದಿ ಸಿಂಹ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಲಿ, ಸಿಂಹಗಳಾದರೆ ಕರ್ನಾಟಕದವವರು ನರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾದಾಯಿ ನೀರಿಗಾಗಿ ಕರ್ನಾಟಕದಲ್ಲಿ ಬಂದ್ ನಡೆಯುತ್ತಿದ್ದಾಗ ರಾಜ್ಯಕ್ಕೆ ಬಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮಹಾದಾಯಿ ವಿಚಾರ ಪ್ರಸ್ತಾಪ ಮಾಡದಿರುವುದು ಬೇಸರದ ಸಂಗತಿ ಎಂದಿದ್ದಾರೆ.
ಮಹಾದಾಯಿ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ಮೇಲೆ ಒತ್ತಡವೇರಲಿ ನಂತರ ರಾಜ್ಯದಲ್ಲಿ ಬಂದು ಮಾತನಾಡಲು ನೈತಿಕತೆ ಇರುತ್ತದೆ. ಬಂದು ಸುಳ್ಳು ಹೇಳುವುದಕ್ಕೆ ನೈತಿಕತೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಹಾದಾಯಿ ನೀರಿಗಾಗಿ ಹೋರಾಟ ನಡೆಯುತ್ತಿದ್ದು, ಫೆಬ್ರುವರಿ 4ರಂದು ರಾಜ್ಯಕ್ಕೆ ಬರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಾದ ಬಗೆಹರಿಸುವುದಾಗಿ ಘೋಷಣೆ ಮಾಡಲಿ ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.