Publish Date: Thu, 26 Oct 2023 (17:20 IST)
Updated Date: Thu, 26 Oct 2023 (17:33 IST)
ರಾಮನಗರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಪ್ರಸ್ತಾಪಿಸಿದ್ದಾರೆ.
ತನ್ಮೂಲಕ ಕೆಂಪೇಗೌಡರು ಕಟ್ಟಿದ ಬೆಂಗಳೂರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬ್ರ್ಯಾಂಡ್ ನೇಮ್ ನಿಂದ ರಾಮನಗರ ಜಿಲ್ಲೆಯ ತಾಲೂಕುಗಳ ರೂಪುರೇಷೆ ಬದಲಿಸಲು ಮುಂದಡಿ ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.