Publish Date: Thu, 17 Jan 2019 (20:05 IST)
Updated Date: Thu, 17 Jan 2019 (20:08 IST)
ಗಡಿ ಜಿಲ್ಲೆಯಾಗಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಬೇಕು. ಹೀಗಂತ ಸಂಸದರ ನೇತೃತ್ವದ ನಿಯೋಗವು ಸಚಿವರಿಗೆ ಮನವಿ ಮಾಡಿದೆ.
ಸಂಸದ ಆರ್. ಧ್ರುವನಾರಾಯಣ್ ಅವರ ನೇತೃತ್ವದಲ್ಲಿ ನಿಯೋಗವು ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದು ಮನವಿ ಮಾಡಿದರು. ಹೆಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು, ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ, ಕಾವೇರಪ್ಪ,
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿ.ಪಂ.ಸದಸ್ಯ ಸದಾಶಿವ ಮೂರ್ತಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಸೇರಿದಂತೆ ಇತರರು ಇದ್ದರು.