Publish Date: Fri, 16 Aug 2019 (19:59 IST)
Updated Date: Fri, 16 Aug 2019 (20:02 IST)
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಭೀಕರ ಪ್ರವಾಹ ಉಂಟಾಗಿ ಹಾನಿಗೊಳಗಾದ ಪ್ರದೇಶದ ನೊಂದ ಸಂತ್ರಸ್ಥರಿಗೆ ನೆರವು ಹರಿದುಬರುತ್ತಿದೆ.
ನೆರೆ ಪೀಡಿತರಿಗೆ ಸಹಾಯಕವಾಗಲು ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಜಿ.ಪಂ. ಎಲ್ಲ ಸದಸ್ಯರು 2019ರ ಆಗಸ್ಟ್ ನ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಣಯಿಸಿದ್ದಾರೆ.
ಈ ಸಂಬಂಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರನ್ನು ಭೇಟಿ ನೀಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ಗೌರವ ಧನ ನೀಡಲು ಒಪ್ಪಿಗೆ ಪತ್ರ ಸಲ್ಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ತಿಳಿಸಿದ್ದಾರೆ.